ಕೃಷ್ಣ ಮೇಲ್ದಂಡೆ ಯೋಜನೆ ರೈತರಿಗೆ ಪರಿಹಾರ
ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ
ಸುದ್ದಿ ಮಿತ್ರ ಬೆಂಗಳೂರು: ಮಾರ್ಚ್ 7
ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸುತ್ತಿರುವ 2025-26ನೇ ಸಾಲಿನ ಬಜೆಟ್ ರಾಜ್ಯದ ಇತಿಹಾಸದಲ್ಲಿ ಹೊಸ ದಾಖಲೆಯನ್ನ ಬರೆದಿದ್ದಾರೆ. 4,09,549 ಕೋಟಿ ಗಾತ್ರದ ಬಜೆಟ್‌ಅನ್ನು ಸಿದ್ದರಾಮಯ್ಯ ಮಂಡಿಸಿದ್ದು, 1,16,000 ಕೋಟಿ ರೂಪಾಯಿ ಸಾಲ ಮಾಡುವುದಾಗಿ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಗಿದೆ.
ಬಜೆಟ್‌ನಲ್ಲಿ ಅಬಕಾರಿ ಇಲಾಖೆಗೆ 36,500 ಕೋಟಿ ರೂ. ಆದಾಯದ ಗುರಿ ನಿಗದಿ ಮಾಡಿದ್ದಾರೆ. ಇದರಿಂದಾಗಿ ರಾಜ್ಯದಲ್ಲಿ ಮದ್ಯದ ಬೆಲೆ ಏರಿಕೆಯಾಗಲಿದೆ. ರಾಜ್ಯ ಸರ್ಕಾರ ಅಬಕಾರಿ ಸ್ಪ್ಯಾಬ್ ಪರಿಷ್ಕರಣೆಗೆ ನಿರ್ಧರಿಸಿದೆ ಎಂದು ಬಜೆಟ್ ಭಾಷಣದಲ್ಲಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.
ಇನ್ನೂ ಬಜೆಟ್‌ನಲ್ಲಿ ಪ್ರಮುಖ ಘೋಷಣೆಗಳನ್ನು ಮಾಡಲಾಗಿದ್ದು, ವೃತ್ತಿ ತೆರಿಗೆಯನ್ನು 200 ರೂ. ರಿಂದ 300 ರೂ.ಗೆ ವೃತ್ತಿ ತೆರಿಗೆ ಏರಿಕೆ ಮಾಡಲಾಗಿದೆ. ಇದಲ್ಲದೆ ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯ ಅಭಿವೃದ್ಧಿಗಾಗಿ ಮೂಲಸೌಕರ್ಯ ಅಭಿವೃದ್ಧಿ ಹೊಸ ಕಾರ್ಯಕ್ರಮ ಜಾರಿ ಮಾಡಲಾಗಿದ್ದು, ಈ ಯೋಜನೆಯಡಿ ರಾಜ್ಯದ ಎಲ್ಲಾ ವಿಧಾನಸಭೆ ಕ್ಷೇತ್ರದ ರಸ್ತೆ, ಸಣ್ಣ ನೀರಾವರಿ, ಮೂಲ ಸೌಕರ್ಯಗಳಿಗೆ 8 ಸಾವಿರ ಕೋಟಿ ರೂಪಾಯಿ ಅನುದಾನವನ್ನು ಘೋಷಿಸಲಾಗಿದೆ.
ಬಿಸಿಯೂಟ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ:
ಬಿಸಿಯೂಟ ಕಾರ್ಯಕರ್ತೆಯರ ಗೌರವಧನ 1 ಸಾವಿರ ಹೆಚ್ಚಳ ಮಾಡಿದ್ದಾರೆ. ಸರ್ಕಾರಿ-ಪ್ರೌಢ ಶಾಲೆ ಅತಿಥಿ ಶಿಕ್ಷಕರ ಗೌರವಧನವನ್ನೂ 2 ಸಾವಿರ ರೂ. ಹೆಚ್ಚಳ ಮಾಡಿದ್ದಾರೆ. ಇದೇ ವೇಳೆ ಶಾಲಾ ಮಕ್ಕಳಿಗೆ ವಾರದಲ್ಲಿ 6 ದಿನ ಮೊಟ್ಟೆ, ಬಾಳೆಹಣ್ಣು ನೀಡಲು 1,500 ರೂ. ಕೋಟಿ ಮೀಸಲಿಟ್ಟಿರುವುದಾಗಿ ತಿಳಿಸಿದ್ದಾರೆ.
ಇಂಧನ 226, 896 ಕೋಟಿ ನೀರಾವರಿ 22,181 ಕೋಟಿ
ಆರೋಗ್ಯ17, 473 ಕೋಟಿ ಕಂದಾಯ 17, 201 ಕೋಟಿ
ಸಮಾಜ ಕಲ್ಯಾಣ 16, 955 ಕೋಟಿ ಮಿಸಲಿಟ್ಟಿದ್ದಾರೆ.
ಜೈನ, ಬೌದ್ಧ ಹಾಗೂ ಸಿಖ್ ಸಮುದಾಯಗಳ ಅಭಿವೃದ್ಧಿಗಾಗಿ 100 ಕೋಟಿ ರೂ. ಮೀಸಲು
ಕ್ರಿಶ್ಚಿಯನ್ ಸಮುದಾಯದ ಅಭಿವೃದ್ಧಿಗಾಗಿ 250 ಕೋಟಿ ರೂ. ಮೀಸಲು
ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿರುವ ರಾಷ್ಟ್ರೀಯ ವಿದೇಶಿ ವಿದ್ಯಾರ್ಥಿ ವೇತನ 20 ಲಕ್ಷದಿಂದ 30 ಲಕ್ಷಕ್ಕೆ ಹೆಚ್ಚಿಸಲಾಗಿದೆ.
ಕೃಷ್ಣ ಮೇಲ್ದಂಡೆ ಯೋಜನೆ 3ನೇ ಹಂತ ವ್ಯಾಪ್ತಿಯ ಆಲಮಟ್ಟಿ ಅಣೆಕಟ್ಟಿನ ಗೇಟ್ ಅನ್ನು 524.256 ಮೀಟರ್ ವರೆಗೆ ಎತ್ತರಿಸುವುದು, ರೈತರಿಗೆ ಪರಿಹಾರ ವಿತರಣೆಗೆ ಕ್ರಮ.
ಕಾಲು ನೋವಿನ ಕಾರಣ ಕುಳಿತುಕೊಂಡೆ ಸಿಎಂ ಸಿದ್ದರಾಮಯ್ಯ ಬಜೆಟ್ ಮಂಡಿಸುತ್ತಿದ್ದು, ಬಜೆಟ್ ಭಾಷಣದಲ್ಲಿ ಗೋಪಾಲಕೃಷ್ಣ ಅಡಿಗ, ಕುವೆಂಪು ಅವರ ಕವನ ಹೇಳುವ ಮೂಲಕ ತಮ್ಮ ಬಜೆಟ್ ಭಾಷಣವನ್ನು ಆರಂಭಿಸಿದರು.

0 Comments