ಚಿತ್ರದರ‍್ಗ, ಡಿ.25: ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗರ‍್ಲತ್ತು ಕ್ರಾಸ್ ಹತ್ತಿರ ಭೀಕರ ರಸ್ತೆ ಅಪಘಾತ ನಡೆದಿದೆ. ಘಟನೆಯಲ್ಲಿ 17ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.
ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಸೀ ಬರ್ಡ್ ಬಸ್
ಡಿವೈಡರ ದಾಟಿ ಬಸ್ ಗೆ ಡಿಕ್ಕಿಯಾಗಿರುವ ಕಂಟೇನರ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸ್ಲೀಪರ್ ಕೋಚ್ ಬಸ್ ರಸ್ತೆ ಮಧ್ಯೆ ಹೊತ್ತಿ ಉರಿದಿದೆ. ಈ ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯದಿಂದ 17ಜನ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.
ಡಿವೈಡರ ದಾಟಿ ಬಸ್ ಗೆ ಡಿಕ್ಕಿಯಾಗಿರುವ ಕಂಟೇನರ್ ಲಾರಿ ಡಿಕ್ಕಿ ಹೊಡೆದ ರಭಸಕ್ಕೆ ಸ್ಲೀಪರ್ ಕೋಚ್ ಬಸ್ ರಸ್ತೆ ಮಧ್ಯೆ ಹೊತ್ತಿ ಉರಿದಿದೆ. ಈ ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯದಿಂದ 17ಜನ ಪ್ರಯಾಣಿಕರು ಸಜೀವ ದಹನವಾಗಿದ್ದಾರೆ.
ಉಳಿದ ಪ್ರಯಾಣಿಕರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇದೀಗ ಈ ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಇದೀಗ ಘಟನಾ ಸ್ಥಳಕ್ಕೆ ಎಸ್ಪಿ ರಂಜಿತ್ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣಾಯಲ್ಲಿ ಘಟನೆಗೆ ಸಂಬಂಧಿಸಿದಂತೆ ದೂರು ದಾಖಲಾಗಿದೆ.
0 Comments